ಯೆಶಾಯ 60:16 - ಪರಿಶುದ್ದ ಬೈಬಲ್16 ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!