Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:18 - ಪರಿಶುದ್ದ ಬೈಬಲ್‌

18 ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:18
23 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.


ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.


ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”


ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.


ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.


ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.


ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.


ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.


ಜೆರುಸಲೇಮಿಗೆ ತೊಂದರೆಗಳು ಎರಡು ಗುಂಪುಗಳಾಗಿ ಬಂದವು: ಲೂಟಿ ಮತ್ತು ಕೊರತೆ; ಕ್ಷಾಮ ಮತ್ತು ಖಡ್ಗ. ನೀನು ಸಂಕಟ ಅನುಭವಿಸುವಾಗ ಯಾರೂ ನಿನಗೆ ಸಹಾಯ ಮಾಡಲಿಲ್ಲ. ಯಾರೂ ನಿನಗೆ ಕರುಣೆ ತೋರಿಸಲಿಲ್ಲ.


ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.


ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.


“ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು.


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು.


ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.


ಆಲಯದ ಸುತ್ತಲೂ ಇದ್ದ ನಾಲ್ಕು ಗೋಡೆಗಳನ್ನು ಅಳೆದನು. ಆ ಗೋಡೆ ಐನೂರು ಮೊಳ ಉದ್ದವಿದ್ದು ಐನೂರು ಮೊಳ ಅಗಲವಿತ್ತು. ಅದು ಪವಿತ್ರಸ್ಥಳವನ್ನೂ ಬೇರೆ ಸ್ಥಳವನ್ನೂ ಬೇರ್ಪಡಿಸಿತ್ತು.


ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.


ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”


ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.” ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು