ಯೆಶಾಯ 60:22 - ಪರಿಶುದ್ದ ಬೈಬಲ್22 ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೆ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಚಿಕ್ಕವನಿಂದ ಒಂದು ಕುಲವಾಗುವದು, ಅಲ್ಪನಿಂದ ಬಲವಾದ ಜನಾಂಗವಾಗುವದು; ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕನಿಷ್ಠನು ಸಾವಿರವಾಗುವನು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತ ಕಾಲದಲ್ಲಿ ಇದನ್ನು ಬಹು ಬೇಗನೆ ಉಂಟುಮಾಡುವೆನು. ಅಧ್ಯಾಯವನ್ನು ನೋಡಿ |
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.