Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:4 - ಪರಿಶುದ್ದ ಬೈಬಲ್‌

4 ನಿನ್ನ ಸುತ್ತಲೂ ನೋಡು. ಜನರು ಸುತ್ತಲೂ ನಿನ್ನ ಬಳಿಗೆ ಬಂದು ಸೇರುವದನ್ನು ನೋಡು. ಅವರು ದೂರ ಪ್ರಾಂತ್ಯದಿಂದ ಬರುವ ನಿನ್ನ ಗಂಡುಮಕ್ಕಳಾಗಿದ್ದಾರೆ. ನಿನ್ನ ಕುಮಾರಿಯರು ಅವರೊಂದಿಗೆ ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:4
18 ತಿಳಿವುಗಳ ಹೋಲಿಕೆ  

“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.


ಮೇಲಕ್ಕೆ ನೋಡು! ನಿನ್ನ ಸುತ್ತಲೂ ನೋಡು! ನಿನ್ನ ಮಕ್ಕಳೆಲ್ಲಾ ಒಟ್ಟಾಗಿ ಸೇರಿ ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿನ್ನ ಮಕ್ಕಳು ನೀನು ಕೊರಳಲ್ಲಿ ಧರಿಸುವ ಹಾರದಂತಿರುವರು. ಮದುಮಗಳು ಧರಿಸುವ ಕಂಠಹಾರದಂತೆ ನಿನ್ನ ಮಕ್ಕಳಿರುವರು.


ನಾನು ಉತ್ತರಕ್ಕೆ ‘ನನ್ನ ಜನರನ್ನು ಬಿಟ್ಟುಕೊಡು’ ಎಂದು ಹೇಳುವೆನು. ದಕ್ಷಿಣಕ್ಕೆ, ‘ನನ್ನ ಜನರನ್ನು ಸೆರೆಮನೆಯಲ್ಲಿರಿಸಬೇಡ’ ಎಂದು ಹೇಳುವೆನು. ಬಹುದೂರ ದೇಶಗಳಿಂದ ನನ್ನ ಮಕ್ಕಳನ್ನು ನನ್ನ ಬಳಿಗೆ ಕರೆದುಕೊಂಡು ಬಾ.


ಮುಂದಿನ ಸಬ್ಬತ್‌ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು.


‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.


ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.


ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.


“ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”


ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರಸಹೋದರಿಯರಾದ ಇಸ್ರೇಲರು ಬರುವರು.


ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು. ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.


ನಾನು ಜನಾಂಗಗಳನ್ನು ನಡುಗಿಸುವೆನು. ಆಗ ಅವರು ಎಲ್ಲಾ ಜನಾಂಗಗಳ ಐಶ್ವರ್ಯದೊಡನೆ ನಿಮ್ಮಲ್ಲಿಗೆ ಬರುವರು. ಆಗ ನನ್ನ ಈ ಆಲಯವನ್ನು ಮಹಿಮೆಯಿಂದ ತುಂಬಿಸುವೆನು.’ ಸರ್ವಶಕ್ತನಾದ ದೇವರು ಇದನ್ನು ಹೇಳುತ್ತಿದ್ದಾನೆ!


ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.


ನಿನ್ನ ಮಕ್ಕಳು ನಿನ್ನ ಬಳಿಗೆ ಹಿಂದಿರುಗಿ ಬರುವರು. ಜನರು ನಿಮ್ಮನ್ನು ಸೋಲಿಸಿದರೂ ಅವರು ನಿಮ್ಮನ್ನು ನಿಮ್ಮಷ್ಟಕ್ಕೆ ಬಿಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು