ಯೆಶಾಯ 60:6 - ಪರಿಶುದ್ದ ಬೈಬಲ್6 ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.
ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.
ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.