ಯೆಶಾಯ 61:10 - ಪರಿಶುದ್ದ ಬೈಬಲ್10 ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.