Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:11 - ಪರಿಶುದ್ದ ಬೈಬಲ್‌

11 ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:11
24 ತಿಳಿವುಗಳ ಹೋಲಿಕೆ  

ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು.


ಚೀಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು.


“ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ. ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ. ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”


ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.


ನಿವಾಸಿಗಳೆಲ್ಲರೂ ದೇವರಿಗೆ ನಂಬಿಗಸ್ತರಾಗಿರುವರು. ಪರಲೋಕದ ದೇವರು ಅವರಿಗೆ ಒಳ್ಳೆಯವನಾಗಿರುವನು.


“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.


ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.


ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.


ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ.


ಪ್ರಖ್ಯಾತವಾದ ಬೆಟ್ಟಗುಡ್ಡಗಳಲ್ಲೆಲ್ಲಾ, ದೇಶದಲ್ಲೆಲ್ಲಾ ಶಾಂತಿಯೂ ನ್ಯಾಯವೂ ನೆಲೆಸಿರಲಿ.


ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.


ಆಗ ಎಲ್ಲಾ ಜನಾಂಗದವರು ಆಕೆಯ ನ್ಯಾಯವನ್ನು ನೋಡುವರು. ಎಲ್ಲಾ ಅರಸರುಗಳು ಆಕೆಯ ಮಹಿಮೆಯನ್ನು ನೋಡುವರು. ಆಗ ನಿನಗೊಂದು ಹೊಸ ಹೆಸರನ್ನು ಕೊಡುವೆನು; ಯೆಹೋವನು ತಾನೇ ಆ ಹೆಸರನ್ನು ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು