Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:2 - ಪರಿಶುದ್ದ ಬೈಬಲ್‌

2 ಯೆಹೋವನು ತಾನು ಕರುಣೆ ತೋರುವ ಸಮಯದ ಕುರಿತಾಗಿ ಸಾರುವಂತೆ ನನ್ನನ್ನು ಕಳುಹಿಸಿದನು. ದುಷ್ಟರನ್ನು ಶಿಕ್ಷಿಸುವ ಸಮಯವನ್ನು ಸಾರಲು ದೇವರು ನನ್ನನ್ನು ಕಳುಹಿಸಿದನು. ದುಃಖಪಡುವ ಜನರನ್ನು ಸಂತೈಸಲು ದೇವರು ನನ್ನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ನೇವಿುಸಿರುವ ಶುಭವರುಷ, ನಮ್ಮ ದೇವರು ಮುಯ್ಯಿ ತೀರಿಸುವ ದಿನ, ಇವುಗಳನ್ನು ಪ್ರಚುರಗೊಳಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:2
34 ತಿಳಿವುಗಳ ಹೋಲಿಕೆ  

ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ಇದು ನೆರವೇರುವುದು, ಯಾಕೆಂದರೆ ದೇವರು ದಂಡನೆಗಾಗಿ ಸಮಯವನ್ನು ಆರಿಸಿಕೊಂಡಿದ್ದಾನೆ. ಜನರು ಚೀಯೋನಿನಲ್ಲಿ ಮಾಡಿದ ಕಾರ್ಯಗಳಿಗೆ ದಂಡನೆಯನ್ನು ಅನುಭವಿಸುವುದಕ್ಕಾಗಿ ಆತನು ಒಂದು ವರ್ಷವನ್ನು ಆರಿಸಿಕೊಂಡಿದ್ದಾನೆ.


ಇಸ್ರೇಲ್ ಎಲ್ಲಿಗೆ ಹೋದನೆಂದು ನಾನು ನೋಡಿದೆನು. ನಾನು ಅವನನ್ನು ಸ್ವಸ್ಥ ಮಾಡುವೆನು. ಅವನನ್ನು ಆದರಿಸುವೆನು. ಒಳ್ಳೆಯ ಮಾತುಗಳಿಂದ ಅವನನ್ನು ರಮಿಸುವೆನು. ಆಗ ಅವನೂ ಅವನ ಜನರೂ ವ್ಯಸನಪಡುವದಿಲ್ಲ.


ಪ್ರಭುವಿನ ಶುಭವರ್ಷವನ್ನು ಪ್ರಕಟಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾನೆ.”


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.


ಹಸಿವೆಗೊಂಡಿರುವ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಅಳುತ್ತಿರುವ ನೀವು ಧನ್ಯರು; ಆನಂದದಿಂದ ನೀವು ನಗುವಿರಿ.


ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”


ಇವೆಲ್ಲವುಗಳ ಕುರಿತಾಗಿ ಒಡೆಯನೂ ಇಸ್ರೇಲಿನ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನನ್ನ ಶತ್ರುಗಳೇ, ನಾನು ನಿಮ್ಮನ್ನು ಶಿಕ್ಷಿಸುವೆನು. ಇನ್ನು ಮುಂದೆ ನೀವು ನನಗೆ ಯಾವ ಕೇಡನ್ನೂ ಮಾಡುವುದಿಲ್ಲ.


ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.


ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?


ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. “ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.


ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು