Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:5 - ಪರಿಶುದ್ದ ಬೈಬಲ್‌

5 ಆಗ ನಿಮ್ಮ ವೈರಿಗಳು ನಿಮ್ಮ ಬಳಿಗೆ ಬಂದು ನಿಮ್ಮ ಕುರಿಮಂದೆಯನ್ನು ಮೇಯಿಸುವರು. ನಿಮ್ಮ ವೈರಿಗಳ ಮಕ್ಕಳು ನಿಮ್ಮ ಹೊಲಗದ್ದೆಗಳಲ್ಲಿಯೂ ತೋಟಗಳಲ್ಲಿಯೂ ಕೆಲಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ವಿದೇಶಿಯರು, ಮಂದೆ ಕಾವಲುಗಾರರಾಗುವರು ನಿಮಗೆ ಅನ್ಯ ಜನರು ಉಳುವವರೂ ತೋಟಗಾರರಾಗುವರೂ ನಿಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ತೋಟಗಾರರೂ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪರನಾಡಿನವರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು. ಇತರರು ನಿಮಗೆ ನೇಗಿಲು ಹೂಡುವವರೂ, ದ್ರಾಕ್ಷಿತೋಟ ಕಾಯುವವರೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:5
5 ತಿಳಿವುಗಳ ಹೋಲಿಕೆ  

ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.


“ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು