Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:7 - ಪರಿಶುದ್ದ ಬೈಬಲ್‌

7 ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಅದಕ್ಕಾಗಿ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಿಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವಾಸ್ತ್ಯದಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:7
19 ತಿಳಿವುಗಳ ಹೋಲಿಕೆ  

ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.


ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ತಾನು ಪ್ರೀತಿಸದೆ ಇರುವ ಹೆಂಡತಿಯ ಚೊಚ್ಚಲಮಗನನ್ನು ಅವನು ಸ್ವೀಕರಿಸಬೇಕು. ಆ ಚೊಚ್ಚಲಮಗನಿಗೆ ಬೇರೆ ಮಕ್ಕಳಿಗಿಂತ ಎರಡು ಪಾಲು ಆಸ್ತಿಯನ್ನು ಕೊಡಬೇಕು. ಯಾಕೆಂದರೆ ಅವನು ನಿಮ್ಮ ಚೊಚ್ಚಲ ಮಗನು. ಚೊಚ್ಚಲ ಮಗನ ಹಕ್ಕು ಅವನಿಗೆ ಸೇರಿದ್ದು.


ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.


ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ಹೇಳಿದನು: “ನನ್ನ ಸೇವಕರು ಊಟಮಾಡುವರು. ಆದರೆ ದುಷ್ಟಜನರಾದ ನೀವು ಹಸಿದವರಾಗಿರುವಿರಿ. ನನ್ನ ಸೇವಕರು ಕುಡಿಯುವರು. ಆದರೆ ದುಷ್ಟಜನರಾದ ನೀವು ಬಾಯಾರಿದ್ದೀರಿ. ನನ್ನ ಸೇವಕರು ಸಂತೋಷದಲ್ಲಿರುವರು. ದುಷ್ಟಜನರಾದ ನೀವಾದರೋ ನಾಚಿಕೆಗೆ ಒಳಗಾಗುವಿರಿ.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು