ಯೆಶಾಯ 62:6 - ಪರಿಶುದ್ದ ಬೈಬಲ್6 ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ. ಅಧ್ಯಾಯವನ್ನು ನೋಡಿ |
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.