Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:8 - ಪರಿಶುದ್ದ ಬೈಬಲ್‌

8 ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:8
16 ತಿಳಿವುಗಳ ಹೋಲಿಕೆ  

“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು.


ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಬನ ಕುಟುಂಬಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು.


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.


ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


“ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು.


ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


“ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.


ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.


ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನ್ನು ಬೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಆ ದ್ರಾಕ್ಷಿತೋಟವನ್ನು ಬೆಳೆಸುವಿರಿ. ರೈತರಾದ ನೀವು ಅದರ ಫಲವನ್ನು ಅನುಭವಿಸುವಿರಿ.


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು