ಯೆಶಾಯ 63:1 - ಪರಿಶುದ್ದ ಬೈಬಲ್1 ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.” ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”