ಯೆಶಾಯ 63:10 - ಪರಿಶುದ್ದ ಬೈಬಲ್10 ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿ |
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.
ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.