Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:12 - ಪರಿಶುದ್ದ ಬೈಬಲ್‌

12 ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಮಧ್ಯದಲ್ಲಿ ತನ್ನಪವಿತ್ರಾತ್ಮವನ್ನಿರಿಸಿ ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದರಿಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಭೇದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:12
23 ತಿಳಿವುಗಳ ಹೋಲಿಕೆ  

ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.


ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು.


ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.


“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು.


ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಯೆಹೋವನು ಸಮುದ್ರದ ಮೂಲಕ ಮಾರ್ಗವನ್ನು ನಿರ್ಮಿಸುವನು. ಅಲ್ಲೋಲಕಲ್ಲೋಲವಾಗಿರುವ ನೀರಿನ ಮೂಲಕ ತನ್ನ ಜನರಿಗೆ ಮಾರ್ಗವನ್ನು ಮಾಡುವನು. ಯೆಹೋವನು ಹೇಳುವುದೇನೆಂದರೆ,


ನೀನು ಸಮುದ್ರವನ್ನು ಬತ್ತಿಸಿರುವೆ. ಮಹಾ ಆಳದ ಗುಂಡಿಗಳ ನೀರನ್ನು ನೀನು ಬತ್ತಿಸಿರುವೆ. ಅತ್ಯಂತ ಆಳವಾದ ಸಮುದ್ರದ ತಳವನ್ನು ನೀನು ರಸ್ತೆಯನ್ನಾಗಿ ಮಾಡಿರುವೆ. ನಿನ್ನ ಜನರು ಆ ರಸ್ತೆಯಲ್ಲಿ ಸಮುದ್ರವನ್ನು ದಾಟಿ ರಕ್ಷಿಸಲ್ಪಟ್ಟರು.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.


ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ ವಿರೋಧವಾಗಿ ನೀನು ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದೆ. ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು ಭಾವಿಸಿಕೊಂಡದ್ದು ನಿನಗೆ ಗೊತ್ತಿತ್ತು. ಆದರೆ ನೀನು ಎಂಥಾ ಮಹಾ ವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ.


ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು