ಯೆಶಾಯ 63:14 - ಪರಿಶುದ್ದ ಬೈಬಲ್14 ಹೊಲದಲ್ಲಿ ನಡೆಯುತ್ತಿರುವಾಗ ಒಂದು ದನವೂ ಬೀಳಲಿಲ್ಲ. ಅದೇ ರೀತಿಯಲ್ಲಿ ಸಮುದ್ರದ ಮಧ್ಯದಲ್ಲಿ ನಡೆಯುವಾಗ ಅವರು ಬೀಳಲಿಲ್ಲ. ವಿಶ್ರಾಂತಿಯ ಸ್ಥಳಕ್ಕೆ ಯೆಹೋವನ ಆತ್ಮವು ಅವರನ್ನು ನಡೆಸಿತು. ದಾರಿಯುದ್ದಕ್ಕೂ ಜನರು ಸುರಕ್ಷಿತರಾಗಿದ್ದರು. ಯೆಹೋವನೇ, ಹೀಗೆ ನೀನು ನಿನ್ನ ಜನರನ್ನು ನಡೆಸಿದೆ. ಹೀಗೆ ನೀನು ನಿನ್ನ ಹೆಸರನ್ನು ಆಶ್ಚರ್ಯಕರವನ್ನಾಗಿ ಮಾಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನ ಆತ್ಮವು ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಅವರನ್ನು ವಿಶ್ರಮಸ್ಥಾನಕ್ಕೆ ಕರತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವದಕ್ಕಾಗಿ ನಿನ್ನ ಜನರನ್ನು ಹೀಗೆ ನಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪಶುವು ತಗ್ಗಿಗೆ ಇಳಿಯುವ ಪ್ರಕಾರ, ಯೆಹೋವ ದೇವರ ಆತ್ಮರು ಅವರಿಗೆ ವಿಶ್ರಾಂತಿಯನ್ನು ಕೊಟ್ಟರು. ಈ ಪ್ರಕಾರ ನೀವು ನಿಮಗೆ ಮಹಿಮೆಯುಳ್ಳ ಹೆಸರನ್ನು ಉಂಟುಮಾಡುವುದಕ್ಕಾಗಿ, ನಿಮ್ಮ ಜನರನ್ನು ನಡಿಸಿದಿರಿ. ಅಧ್ಯಾಯವನ್ನು ನೋಡಿ |
ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.