ಯೆಶಾಯ 63:15 - ಪರಿಶುದ್ದ ಬೈಬಲ್15 ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ? ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.