Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:17 - ಪರಿಶುದ್ದ ಬೈಬಲ್‌

17 ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರ ಮಾಡಿರುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯಮಾಡು. ನಮ್ಮ ಕುಟುಂಬಗಳು ನಿನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:17
23 ತಿಳಿವುಗಳ ಹೋಲಿಕೆ  

ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


“ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”


ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ. ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ಪವಿತ್ರ ಪೆಟ್ಟಿಗೆಯು ಕೆಳಗಿಳಿಸಲ್ಪಟ್ಟಾಗ, ಮೋಶೆಯು, “ಯೆಹೋವನೇ ಇಸ್ರೇಲರ ಲಕ್ಷಾಂತರ ಕುಟುಂಬಗಳ ಬಳಿಗೆ ಹಿಂತಿರುಗಿ ಬಾ” ಎಂದು ಹೇಳುತ್ತಿದ್ದನು.


ಆಗ ಯೆಹೋವನ ದೂತನು, “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.


ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.


ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.


ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ; ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು.


ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು.


ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.


ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.


ನಾನು ಅದ್ಭುತಕಾರ್ಯಗಳಿಂದ ಅವರನ್ನು ಆಶ್ಚರ್ಯಗೊಳಿಸುತ್ತಾ ಇರುವೆನು. ಅವರ ಜ್ಞಾನಿಗಳು ತಮ್ಮ ಜ್ಞಾನವನ್ನು ಕಳೆದುಕೊಳ್ಳುವರು. ಅವರು ಅರ್ಥಮಾಡಿಕೊಳ್ಳಲಾರರು.”


ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.


ಆತನು ನನ್ನ ದಾರಿಯನ್ನು ಕಲ್ಲುಗಳಿಂದ ಮುಚ್ಚಿದ್ದಾನೆ. ಆತನು ನನ್ನ ಹಾದಿಯನ್ನು ಡೊಂಕುಗೊಳಿಸಿದ್ದಾನೆ.


ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’


ಸರ್ವಶಕ್ತನಾದ ಯೆಹೋವನು ಈ ದೇಶಗಳನ್ನು ಆಶೀರ್ವದಿಸುವನು. ಆತನು, “ಈಜಿಪ್ಟೇ, ನೀನು ನನ್ನವನು; ಅಶ್ಶೂರವೇ, ನಾನು ನಿನ್ನನ್ನು ನಿರ್ಮಿಸಿದೆನು. ಇಸ್ರೇಲೇ, ನೀನು ನನ್ನ ಸ್ವಾಸ್ತ್ಯ. ನೀವೆಲ್ಲರೂ ಆಶೀರ್ವದಿಸಲ್ಪಟ್ಟವರು” ಎನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು