ಯೆಶಾಯ 63:18 - ಪರಿಶುದ್ದ ಬೈಬಲ್18 ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸ್ವಲ್ಪಕಾಲ ಮಾತ್ರ ನಿಮ್ಮ ಪರಿಶುದ್ಧ ಜನರು ಅದನ್ನು ಸ್ವಾಧೀನಮಾಡಿಕೊಂಡರು. ನಮ್ಮ ಶತ್ರುಗಳು ನಿಮ್ಮ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.