ಯೆಶಾಯ 64:10 - ಪರಿಶುದ್ದ ಬೈಬಲ್10 ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು. ಅಧ್ಯಾಯವನ್ನು ನೋಡಿ |
ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.