Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:11 - ಪರಿಶುದ್ದ ಬೈಬಲ್‌

11 ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಪಿತೃಗಳು ನಿನ್ನನ್ನು ಕೀರ್ತಿಸುತ್ತಿದ್ದ ನಮ್ಮ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯವಸ್ತುಗಳೆಲ್ಲಾ ನಾಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:11
21 ತಿಳಿವುಗಳ ಹೋಲಿಕೆ  

ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.


ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.


ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು.


ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


“ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಿದ್ದಾನೆ. ಆತನು ದಾವೀದನಿಗೆ,


“ಯೆಹೋವನಿಗೆ ಸ್ತೋತ್ರ ಮಾಡಿರಿ! ಆತನು ಇಸ್ರೇಲಿನ ತನ್ನ ಜನರಿಗೆ ವಿಶ್ರಾಂತಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ಆತನು ನಮಗೆ ವಿಶ್ರಾಂತಿಯನ್ನು ದಯಪಾಲಿಸಿರುವನು! ಯೆಹೋವನು ತನ್ನ ಸೇವಕನಾದ ಮೋಶೆಯಿಂದ, ಇಸ್ರೇಲಿನ ಜನರಿಗೆ ಅನೇಕ ಒಳ್ಳೆಯ ವಾಗ್ದಾನಗಳನ್ನು ಮಾಡಿದ್ದಾನೆ. ಯೆಹೋವನು ತನ್ನ ವಾಗ್ದಾನಗಳನ್ನೆಲ್ಲ ಈಡೇರಿಸಿರುವನು.


ಇಸ್ರೇಲಿನ ಜನರೆಲ್ಲರೂ ಅಲ್ಲಿ ನಿಂತಿದ್ದರು. ರಾಜನಾದ ಸೊಲೊಮೋನನು ಅವರ ಕಡೆಗೆ ತಿರುಗಿ, ಅವರನ್ನು ಆಶೀರ್ವದಿಸಲು ದೇವರನ್ನು ಬೇಡಿದನು.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ಆಗ ಯೆಹೋವನ ದೂತನು, “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಈ ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು