ಯೆಶಾಯ 64:2 - ಪರಿಶುದ್ದ ಬೈಬಲ್2 ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರವೂ ನೀರನ್ನು ಕುದಿಸುವ ಉರಿಯೋಪಾದಿಯಲ್ಲಿಯೂ [ನೀನು ಪ್ರತ್ಯಕ್ಷನಾಗಿ] ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ, ಬೆಂಕಿ ನೀರನ್ನು ಉಕ್ಕಿಸುವಂತೆಯೂ, ನೀನು ಇಳಿದುಬಂದು ನಿನ್ನ ಹೆಸರನ್ನು ನಿನ್ನ ವೈರಿಗಳಿಗೆ ತಿಳಿಯುವಂತೆ ಮಾಡು! ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.