Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:7 - ಪರಿಶುದ್ದ ಬೈಬಲ್‌

7 ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:7
27 ತಿಳಿವುಗಳ ಹೋಲಿಕೆ  

“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.


ಜನರಿಗೆ ಸಹಾಯ ಮಾಡುವವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಆಶ್ಚರ್ಯಚಕಿತನಾಗಿದ್ದಾನೆ. ಆದ್ದರಿಂದ ಯೆಹೋವನು ತನ್ನ ಸ್ವಂತ ಶಕ್ತಿಯನ್ನೂ ನೀತಿಯನ್ನೂ ಬಳಸಿ ಜನರನ್ನು ರಕ್ಷಿಸಿದನು.


ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದುಹೋದರು. ಅವರಲ್ಲಿ ಒಬ್ಬರಾದಲೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ.”


ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.


ನಾನು ತುಂಬಾ ಸಿಟ್ಟುಗೊಂಡಿದ್ದೆನು ಮತ್ತು ಸ್ವಲ್ಪ ಕಾಲಕ್ಕೆ ನಿನಗೆ ಮರೆಯಾದೆನು. ಆದರೆ ನಿನ್ನನ್ನು ಕರುಣೆಯಿಂದ ನಿರಂತರವೂ ಸಂತೈಸುವೆನು.” ನಿನ್ನ ರಕ್ಷಕನಾದ ಯೆಹೋವನ ನುಡಿಗಳಿವು.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ಬರಿದಾದ ಹಂಡೆಯು ಉರಿಯುವ ಕೆಂಡಗಳ ಮೇಲಿದ್ದು, ಕಾದು ಅದರ ತಾಮ್ರವು ಕೆಂಪಾಗಲಿ. ಮತ್ತು ಅದರೊಳಗಿರುವ ಕಲೆಗಳು ಕರಗಿಹೋಗಲಿ. ಮತ್ತು ಅದರ ಕಿಲುಬು ಸುಟ್ಟುಹೋಗಲಿ.


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಜನರು ಲೋಹವನ್ನು ಪುಟಕ್ಕಿಟ್ಟು ಪರೀಕ್ಷಿಸುವಂತೆ ನಾನು ಯೆಹೂದದ ಜನರನ್ನು ಪರೀಕ್ಷಿಸುತ್ತೇನೆ. ನನಗೆ ಬೇರೆ ಮಾರ್ಗವೇ ಇಲ್ಲ. ನನ್ನ ಜನರು ಪಾಪವನ್ನು ಮಾಡಿದ್ದಾರೆ.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಈ ಜನರು ದುಷ್ಕೃತ್ಯಗಳನ್ನು ನಡಿಸಿ ನನಗೆ ಕೋಪವನ್ನೆಬ್ಬಿಸಿದರು. ಆದ್ದರಿಂದ ನಾನು ಇಸ್ರೇಲನ್ನು ಶಿಕ್ಷಿಸಿದೆನು. ನಾನು ಕೋಪಗೊಂಡು ಅವರಿಗೆ ವಿಮುಖನಾದೆನು. ಇಸ್ರೇಲ್ ನನ್ನನ್ನು ತೊರೆದು ತನಗಿಷ್ಟವಾದ ಸ್ಥಳಕ್ಕೆ ಹೋದನು.


ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.


ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪ ಮಾಡಿದ್ದರಿಂದ ಆತನು ಅವರನ್ನು ಶಿಕ್ಷಿಸಿದ್ದಾನೆ. ಅವರ ಪಾಪಗಳಿಗಾಗಿ ಪ್ರತಿಫಲ ದೊರೆಯಿತು.


ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.


ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ?


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.


ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು