ಯೆಶಾಯ 65:11 - ಪರಿಶುದ್ದ ಬೈಬಲ್11 “ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ ಅಧ್ಯಾಯವನ್ನು ನೋಡಿ |
ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.