Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:12 - ಪರಿಶುದ್ದ ಬೈಬಲ್‌

12 ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:12
34 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ಆ ರಾಜನು ಕೆಲವು ಜನರನ್ನು ಔತಣಕ್ಕೆ ಆಹ್ವಾನಿಸಿದನು. ಅಡಿಗೆ ಸಿದ್ಧವಾದ ಬಳಿಕ ರಾಜನು ತನ್ನ ಸೇವಕರ ಮೂಲಕ ಆ ಜನರಿಗೆ ತಿಳಿಸಿದನು. ಆದರೆ ಅವರು ಔತಣಕ್ಕೆ ಬರಲಿಲ್ಲ.


ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”


“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.


ಅವರು ನನ್ನ ಮುಂದೆ ಯಾವಾಗಲೂ ಇದ್ದು ನನ್ನನ್ನು ರೋಷಗೊಳಿಸಿದರು. ಅವರು ತಮ್ಮ ವಿಶೇಷವಾದ ತೋಟಗಳಲ್ಲಿ ಧೂಪಹಾಕಿ ಬಲಿಯರ್ಪಿಸಿದರು.


ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾನು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ.


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಆ ಸಮಯದಲ್ಲಿ ನಿಮ್ಮ ಗಂಡಸರೆಲ್ಲಾ ಖಡ್ಗದಿಂದ ಹತರಾಗುವರು. ನಿಮ್ಮ ವೀರರೆಲ್ಲರೂ ಯುದ್ಧದಲ್ಲಿ ಮಡಿಯುವರು.


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


ನನ್ನ ಮಾತುಗಳನ್ನು ಕೇಳದೆ ಹೋದರೆ ನೀವು ನನಗೆ ವಿರೋಧಿಗಳಾಗಿದ್ದೀರಿ. ನಿಮ್ಮ ವೈರಿಯು ನಿಮ್ಮನ್ನು ನಾಶಮಾಡುವನು.” ಯೋಹೋವನೇ ಇವುಗಳನ್ನು ನುಡಿದಿದ್ದಾನೆ.


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


“ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.


ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.


ನಾನು ಕೋಪಗೊಂಡಾಗ ಜನಾಂಗಗಳ ಮೇಲೆ ತುಳಿದಾಡಿದೆನು. ನಾನು ಸಿಟ್ಟುಗೊಂಡಾಗ ಅವರನ್ನು ಶಿಕ್ಷಿಸಿದೆನು. ಅವರ ರಕ್ತವನ್ನು ನೆಲದ ಮೇಲೆ ಚೆಲ್ಲಿದೆನು.”


ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.


“ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ.


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’”


ಕೆಲವು ಜನಾಂಗಗಳು ನನ್ನ ಮಾತಿಗೆ ಕಿವಿಗೊಡುವುದಿಲ್ಲ. ಆಗ ನಾನು ನನ್ನ ಕೋಪವನ್ನು ಪ್ರದರ್ಶಿಸಿ ಮುಯ್ಯಿತೀರಿಸುವೆನು.”


ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು