ಯೆಶಾಯ 65:13 - ಪರಿಶುದ್ದ ಬೈಬಲ್13 ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ಹೇಳಿದನು: “ನನ್ನ ಸೇವಕರು ಊಟಮಾಡುವರು. ಆದರೆ ದುಷ್ಟಜನರಾದ ನೀವು ಹಸಿದವರಾಗಿರುವಿರಿ. ನನ್ನ ಸೇವಕರು ಕುಡಿಯುವರು. ಆದರೆ ದುಷ್ಟಜನರಾದ ನೀವು ಬಾಯಾರಿದ್ದೀರಿ. ನನ್ನ ಸೇವಕರು ಸಂತೋಷದಲ್ಲಿರುವರು. ದುಷ್ಟಜನರಾದ ನೀವಾದರೋ ನಾಚಿಕೆಗೆ ಒಳಗಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗಿರುವುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಸೇವಕರು ತಿನ್ನುವರು. ಆದರೆ ನೀವು ಹಸಿದಿರುವಿರಿ. ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿ ಇರುವಿರಿ. ಇಗೋ, ನನ್ನ ಸೇವಕರು ಸಂತೋಷಪಡುವರು, ಆದರೆ ನೀವು ನಾಚಿಕೆ ಪಡುವಿರಿ. ಅಧ್ಯಾಯವನ್ನು ನೋಡಿ |
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”