ಯೆಶಾಯ 65:16 - ಪರಿಶುದ್ದ ಬೈಬಲ್16 “ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.