Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:17 - ಪರಿಶುದ್ದ ಬೈಬಲ್‌

17 “ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಈ ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ಹೊಸ ಆಕಾಶವನ್ನೂ, ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:17
10 ತಿಳಿವುಗಳ ಹೋಲಿಕೆ  

ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.


“ನಾನು ಹೊಸ ಪ್ರಪಂಚವನ್ನು ಸೃಷ್ಟಿಸುವೆನು; ಹೊಸ ಆಕಾಶವೂ ಹೊಸ ಭೂಮಿಯೂ ಶಾಶ್ವತವಾಗಿರುವವು. ಹಾಗೆಯೇ ನಿಮ್ಮ ಹೆಸರುಗಳು ಯಾವಾಗಲೂ ನನ್ನೊಂದಿಗೆ ಇರುತ್ತವೆ; ನಿಮ್ಮ ಮಕ್ಕಳು ನನ್ನೊಂದಿಗೆ ಯಾವಾಗಲೂ ಇರುತ್ತಾರೆ.


ಆದ್ದರಿಂದ ಆದಿಯಲ್ಲಿ ನಡೆದ ಸಂಗತಿಗಳನ್ನು ಜ್ಞಾಪಕಮಾಡಿಕೊಳ್ಳಬೇಡ. ಬಹಳ ಕಾಲದ ಹಿಂದೆ ನಡೆದ ಸಂಗತಿಗಳನ್ನು ನೆನೆಸಬೇಡ.


ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


“ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.


ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು