ಯೆಶಾಯ 65:18 - ಪರಿಶುದ್ದ ಬೈಬಲ್18 ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, ಎಂದೆಂದಿಗೂ ಉಲ್ಲಾಸಪಡಿರಿ. ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ. ಅಧ್ಯಾಯವನ್ನು ನೋಡಿ |
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.