ಯೆಶಾಯ 65:19 - ಪರಿಶುದ್ದ ಬೈಬಲ್19 “ಆಗ ನಾನು ಜೆರುಸಲೇಮಿನ ವಿಷಯದಲ್ಲಿ ಸಂತೋಷದಿಂದಿರುವೆನು. ನನ್ನ ಜನರ ವಿಷಯದಲ್ಲಿಯೂ ಸಂತೋಷದಿಂದಿರುವೆನು. ಆ ಪಟ್ಟಣದಲ್ಲಿ ಮತ್ತೆಂದಿಗೂ ರೋಧನವಿರದು, ದುಃಖವಿರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷ ಪಡುವೆನು. ಅದರಲ್ಲಿ ಅಳುವ ಧ್ವನಿಯೂ, ಪ್ರಲಾಪದ ಧ್ವನಿಯೂ ಇನ್ನು ಕೇಳಿಬರುವುದಿಲ್ಲ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.