ಯೆಶಾಯ 65:2 - ಪರಿಶುದ್ದ ಬೈಬಲ್2 “ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ದಿನವೆಲ್ಲಾ ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು. ಅಧ್ಯಾಯವನ್ನು ನೋಡಿ |
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”