Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:20 - ಪರಿಶುದ್ದ ಬೈಬಲ್‌

20 ಆ ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಆ ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ, ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೆಲವೇ ದಿನ ಬದುಕುವ ಮಗುವಾಗಲಿ, ಆಯುಸ್ಸು ಮುಗಿಸದ ಮುದುಕನಾಗಲಿ ಇನ್ನು ಇಲ್ಲಿರನು. ನೂರು ವರ್ಷ ಬಾಳುವವನು ‘ಯುವಕ’ ಎನಿಸಿಕೊಳ್ಳುವನು; ನೂರರೊಳಗೆ ಸಾಯುವ ಪಾಪಿಯು ‘ಶಾಪಗ್ರಸ್ತ’ ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕೆಲವು ದಿವಸ ಮಾತ್ರ ಬದುಕತಕ್ಕ ಕೂಸಾಗಲಿ ವಯಸ್ಸಾಗದೆ ಮುದುಕನಾದವನಾಗಲಿ ಅಲ್ಲಿ ಇರುವದಿಲ್ಲ; ಯುವಕನು ನೂರು ವರುಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರುಷದೊಳಗೆ ಶಾಪತಗಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, ವೃದ್ಧನೂ ಇರುವುದಿಲ್ಲ. ಮಗುವು ನೂರು ವರುಷದವನಾಗಿ ಸಾಯುವುದು. ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:20
8 ತಿಳಿವುಗಳ ಹೋಲಿಕೆ  

ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ?


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ವೃದ್ಧವೃದ್ಧೆಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ಕಾಣಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು