ಯೆಶಾಯ 65:22 - ಪರಿಶುದ್ದ ಬೈಬಲ್22 ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ, ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತವೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಪೂರಾ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿ |
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.