ಯೆಶಾಯ 65:23 - ಪರಿಶುದ್ದ ಬೈಬಲ್23 ಇನ್ನು ಮುಂದೆ ಜನರು ಬಿಟ್ಟೀಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು. ಅಧ್ಯಾಯವನ್ನು ನೋಡಿ |
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”