Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:6 - ಪರಿಶುದ್ದ ಬೈಬಲ್‌

6 “ಇಗೋ! ನೀವು ಪಾವತಿ ಮಾಡಬೇಕಾದ ರಸೀದಿ ಇಲ್ಲಿದೆ. ನೀವು ಅಪರಾಧಿಗಳೆಂದು ಈ ರಸೀದಿ ತೋರಿಸುತ್ತದೆ. ಈ ಚೀಟಿಯಲ್ಲಿ ಬರೆದ ಮೊತ್ತವನ್ನು ಕೊಡದೆ ಸುಮ್ಮನಿರಲಾರೆ. ನಿಮ್ಮನ್ನು ಶಿಕ್ಷಿಸುವದರ ಮೂಲಕ ಈ ಮೊತ್ತವನ್ನು ಕೊಟ್ಟು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿತೀರಿಸುವ ತನಕ ಸುಮ್ಮನಿರಲಾರೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನನ್ನ ಮುಂದೆ ಅದು ಬರೆಯಲಾಗಿದೆ. ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ. ಅವರ ಮಡಿಲಲ್ಲಿ ಪ್ರತಿಫಲ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:6
22 ತಿಳಿವುಗಳ ಹೋಲಿಕೆ  

ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”


ಒಡೆಯನೇ, ನಮ್ಮ ಸುತ್ತಮುತ್ತಲಿನ ಜನರು ಮಾಡಿದ ಕಾರ್ಯಗಳಿಗಾಗಿ ಅವರನ್ನು ಏಳರಷ್ಟು ದಂಡಿಸು. ನಿನಗೆ ಅವಮಾನಮಾಡಿದ್ದರಿಂದ ಅವರನ್ನು ದಂಡಿಸು.


ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ?


“ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರು ಬಿಡುವೆನು.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.


“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.


ಅದಕ್ಕಾಗಿ ನಾನು ಅವರಿಗೆ ನನ್ನ ಕೋಪವನ್ನು ತೋರಿಸುವೆನು. ಅವರ ದುಷ್ಟತನಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರೇ ಅದಕ್ಕೆ ಜವಾಬ್ದಾರರು.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇಬೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು.


ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.


“ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ. ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ.


ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”


ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು.


ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.


ಆಲೈಸಿರಿ! ಪಟ್ಟಣದೊಳಗಿಂದ ಮತ್ತು ದೇವಾಲಯದೊಳಗಿಂದ ದೊಡ್ಡ ಶಬ್ದವು ಕೇಳಿಸುತ್ತದೆ. ಯೆಹೋವನು ತನ್ನ ವೈರಿಗಳನ್ನು ಶಿಕ್ಷಿಸುವುದೇ ಆ ಶಬ್ದ. ಅವರಿಗೆ ತಕ್ಕ ಶಿಕ್ಷೆಯನ್ನು ಯೆಹೋವನು ಕೊಡುತ್ತಿದ್ದಾನೆ.


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು