ಯೆಶಾಯ 65:7 - ಪರಿಶುದ್ದ ಬೈಬಲ್7 ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.” ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”