Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:9 - ಪರಿಶುದ್ದ ಬೈಬಲ್‌

9 ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:9
25 ತಿಳಿವುಗಳ ಹೋಲಿಕೆ  

ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”


ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.


“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.


ದೇವರು ಹೇಳಿದ್ದೇನೆಂದರೆ, “ನಾನು ಆ ದೇಶಗಳಿಂದ ನಿಮ್ಮನ್ನು ತೆಗೆದು, ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಸ್ವದೇಶಕ್ಕೆ ತಿರುಗಿ ಬರಮಾಡುವೆನು.


ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ, ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತವೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು.


ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.


ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು