Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:12 - ಪರಿಶುದ್ದ ಬೈಬಲ್‌

12 ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:12
19 ತಿಳಿವುಗಳ ಹೋಲಿಕೆ  

ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.


ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.


ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.


ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ.


ಆಗ ನಿಮ್ಮನ್ನು “ಯೆಹೋವನ ಯಾಜಕರು” ಎಂತಲೂ “ದೇವರ ಸಹಾಯಕರು” ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.


ಯಾಕೆಂದರೆ ನೀನು ಅಧಿಕವಾಗಿ ಬೆಳೆಯುವಿ. ನಿನ್ನ ಮಕ್ಕಳು ಅನೇಕ ಜನಾಂಗಗಳನ್ನು ವಶಮಾಡಿಕೊಳ್ಳುವರು. ಕೆಡವಿಹಾಕಿದ ಪಟ್ಟಣಗಳಲ್ಲಿ ನಿನ್ನ ಮಕ್ಕಳು ತಿರಿಗಿ ವಾಸಿಸುವರು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ಕೆಂದರೆ ಬಲಿಷ್ಠನಾದ ಯೆಹೋವನು ಅಲ್ಲಿದ್ದಾನೆ. ಆ ದೇಶವು ತೊರೆಗಳೂ ಅಗಲವಾಗಿ ಹರಿಯುವ ನದಿಗಳೂ ಇರುವ ದೇಶವಾಗಿದೆ. ಆದರೆ ಆ ನದಿಯಲ್ಲಿ ವೈರಿಯ ದೋಣಿಯಾಗಲಿ, ಹಡಗುಗಳಾಗಲಿ ಇರುವದಿಲ್ಲ. ಆ ಹಡುಗುಗಳಲ್ಲಿ ಕೆಲಸಮಾಡುವವರೇ, ನೀವು ಅದರ ಹಗ್ಗಗಳಲ್ಲಿ ಕೆಲಸಮಾಡುವದನ್ನು ಬಿಟ್ಟುಬಿಡಿರಿ. ಹಡಗಿನ ಸ್ತಂಭವನ್ನು ನೀವು ಬಲಪಡಿಸಲಾರಿರಿ. ಹಡಗಿನ ಹಾಯಿಗಳನ್ನು ನಿಮ್ಮಿಂದ ತೆರೆಯಲು ಆಗುವದಿಲ್ಲ. ಯಾಕೆಂದರೆ ದೇವರೇ ನಮ್ಮ ನ್ಯಾಯಾಧೀಶನು. ಆತನು ಧರ್ಮಶಾಸ್ತ್ರವನ್ನು ಸಿದ್ಧಪಡಿಸಿದಾತನು. ಯೆಹೋವನೇ ನಮ್ಮ ಅರಸನು. ಆತನೇ ನಮ್ಮನ್ನು ರಕ್ಷಿಸುವನು, ನಮಗೆ ಸಂಪತ್ತನ್ನು ದಯಪಾಲಿಸುವನು. ಕೈಕಾಲು ಊನವಾದವರೂ ಸಹ ಯುದ್ಧದಲ್ಲಿ ಸಂಪತ್ತನ್ನು ಗಳಿಸುವರು.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


‘ಈ ಅಂತಿಮ ದೇವಾಲಯವು ಮೊದಲನೆ ಆಲಯಕ್ಕಿಂತಲೂ ಸುಂದರವಾಗಿಯೂ ವೈಭವವಾಗಿಯೂ ಇರುವುದು! ನಾನು ಈ ಸ್ಥಳಕ್ಕೆ ಸಮಾಧಾನವನ್ನು ತರುವೆನು!’ ಜ್ಞಾಪಕದಲ್ಲಿಡಿ, ಇವುಗಳನ್ನು ಸರ್ವಶಕ್ತನಾದ ಯೆಹೋವನು ಹೇಳುತ್ತಿದ್ದಾನೆ!”


ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು