Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:14 - ಪರಿಶುದ್ದ ಬೈಬಲ್‌

14 ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:14
27 ತಿಳಿವುಗಳ ಹೋಲಿಕೆ  

ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು.


ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು.


ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.


ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.


ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ.


ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು.


ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.


ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.”


ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.


ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.


ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.


ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”


ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.


ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.


ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು