Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:15 - ಪರಿಶುದ್ದ ಬೈಬಲ್‌

15 ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿಜ್ವಾಲೆಯಿಂದ ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:15
33 ತಿಳಿವುಗಳ ಹೋಲಿಕೆ  

ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ಬೆಂಕಿಯು ಆತನ ಮುಂದೆ ಹೋಗಿ ಆತನ ಶತ್ರುಗಳನ್ನು ನಾಶಮಾಡುವುದು.


ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.


ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.


ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.


ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


“ನೀವು ಕೆಟ್ಟಕಾರ್ಯಗಳನ್ನು ಮಾಡಿ ಯೆಹೋವನಿಂದ ದೂರವಾಗಿ ಹೋದರೆ ನಿಮಗೆ ಕೆಟ್ಟಸಂಗತಿಗಳು ಉಂಟಾಗುವವು. ನಿಮಗೆ ಉಪದ್ರವಗಳೂ ಮನಸ್ಸಿಗೆ ಅಸಮಾಧಾನವೂ ಉಂಟಾಗುವವು. ನೀವು ಸಂಪೂರ್ಣವಾಗಿ ನಾಶವಾಗುವ ತನಕ ಈ ಸಂಗತಿಗಳು ನಿಮ್ಮನ್ನು ಬಾಧಿಸುವವು. ನೀವು ಆತನನ್ನು ತೊರೆದದ್ದರಿಂದ ನಿಮಗೆ ಹಾಗೆ ಮಾಡುವನು.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.


ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.


ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.


ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.


ನೆಮ್ಮದಿಯಿಂದ ಕೂಡಿದ ಆ ಹುಲ್ಲುಗಾವಲುಗಳು ಬರಿದಾದ ಮರುಭೂಮಿಗಳಂತಾಗಿವೆ. ಏಕೆಂದರೆ ಯೆಹೋವನು ತುಂಬಾ ಕೋಪಗೊಂಡಿದ್ದಾನೆ.


ಈಜಿಪ್ಟೇ, ನಿಮ್ಮ ಶೂರಸೈನಿಕರು ಏಕೆ ಕೊಲ್ಲಲ್ಪಡುವರು? ಅವರು ನಿಲ್ಲಲಾರರು. ಏಕೆಂದರೆ ಯೆಹೋವನು ಅವರನ್ನು ನೆಲಕ್ಕೆ ತಳ್ಳುವನು.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”


ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?


ಆತನು ಆಕಾಶವನ್ನು ಹರಿದು ಕೆಳಗಿಳಿದು ಬಂದನು. ಆತನು ದಟ್ಟವಾದ ಕಪ್ಪುಮೋಡದ ಮೇಲೆ ನಿಂತುಕೊಂಡನು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು