Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:16 - ಪರಿಶುದ್ದ ಬೈಬಲ್‌

16 ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ ಯೆಹೋವ ದೇವರು ಮನುಷ್ಯರಿಗೆಲ್ಲಾ ನ್ಯಾಯತೀರಿಸುವರು. ಯೆಹೋವ ದೇವರಿಂದ ಹತರಾಗುವವರು ಅನೇಕರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:16
23 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ಯೆಹೋವನು ತನ್ನ ಜನರಿಗೆ ನ್ಯಾಯತೀರಿಸಲು ಎದ್ದುನಿಂತಿದ್ದಾನೆ.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.


ಆದರೆ ನಿಮ್ಮ ಭವಿಷ್ಯವನ್ನು ನಾನು ತೀರ್ಮಾನಿಸುವೆನು. ನೀವು ಖಡ್ಗದಿಂದ ಸಾಯುವಿರಿ ಎಂದು ನಾನು ತೀರ್ಮಾನಿಸಿದ್ದೇನೆ. ನೀವೆಲ್ಲರೂ ಕೊಲ್ಲಲ್ಪಡುವಿರಿ. ಯಾಕೆಂದರೆ ನಾನು ನಿಮ್ಮನ್ನು ಕರೆದಾಗ ನೀವು ಉತ್ತರ ಕೊಡಲಿಲ್ಲ. ನಾನು ಮಾತನಾಡಿದಾಗ ನೀವು ಆಲಿಸಲಿಲ್ಲ. ನಾನು ಕೆಟ್ಟದ್ದೆಂದು ಹೇಳಿದವುಗಳನ್ನು ನೀವು ಮಾಡಿದಿರಿ; ನನಗೆ ಇಷ್ಟವಿಲ್ಲದ್ದನ್ನು ನೀವು ಮಾಡುತ್ತಿರುವಿರಿ.”


ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’” ಈ ಸಂದೇಶವು ಯೆಹೋವನಿಂದ ಬಂದದ್ದು.


ಆ ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಬಿದ್ದಿರುವವು. ಆ ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನ್ನು ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವವು.


ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.”’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’”


ಈಜಿಪ್ಟೇ, ನಿಮ್ಮ ಶೂರಸೈನಿಕರು ಏಕೆ ಕೊಲ್ಲಲ್ಪಡುವರು? ಅವರು ನಿಲ್ಲಲಾರರು. ಏಕೆಂದರೆ ಯೆಹೋವನು ಅವರನ್ನು ನೆಲಕ್ಕೆ ತಳ್ಳುವನು.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”


ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.


ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ, ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ, ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿಬೀಳುತ್ತಾರೆ.


ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡತೆಗಳ ಹಿಂಡಿನಿಂದ ತಿಂದುಹಾಕಲ್ಪಟ್ಟ ದೇಶದಂತೆ ಕಾಣುವುದು. ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡತೆಗಳ ಹಿಂಡಿನಂತಾದೆ. ನೀನು ಮಿಡತೆಗಳಂತಾದೆ.


ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.


ಯೆಹೋವನು ಎಲ್ಲಾ ದೇಶಗಳವರ ಮೇಲೆಯೂ ಅವುಗಳ ಸೈನ್ಯದ ಮೇಲೆಯೂ ಕೋಪಗೊಂಡಿದ್ದಾನೆ. ಯೆಹೋವನು ಅವರೆಲ್ಲರನ್ನು ನಾಶಮಾಡುತ್ತಾನೆ. ಅವರೆಲ್ಲರೂ ಕೊಲ್ಲಲ್ಪಡುವಂತೆ ಮಾಡುತ್ತಾನೆ.


ನೀನು ಅನೇಕ ತಪ್ಪುಗಳನ್ನು ಮಾಡಿದೆ. ನೀನು ಮೋಸಗಾರನಾದ ವ್ಯಾಪಾರಿ. ಇದರಿಂದಾಗಿ ನೀನು ಪವಿತ್ರಸ್ಥಳವನ್ನು ಹೊಲೆ ಮಾಡಿರುವಿ. ಆದ್ದರಿಂದ ನಿನ್ನೊಳಗೆ ಬೆಂಕಿಯನ್ನು ಬರಮಾಡಿ ಅದು ನಿನ್ನನ್ನು ದಹಿಸುವಂತೆ ಮಾಡಿದೆನು. ನೀನು ಸುಟ್ಟ ಬೂದಿಯಾದೆ. ಈಗ ಎಲ್ಲರೂ ನಿನ್ನ ಲಜ್ಜಾತನವನ್ನು ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು