Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:17 - ಪರಿಶುದ್ದ ಬೈಬಲ್‌

17 ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತೋಟಗಳೊಳಗೆ ಪ್ರವೇಶಿಸುವದಕ್ಕೆ ತಮ್ಮ ಮಧ್ಯದಲ್ಲಿನ ಒಬ್ಬನ ಅಂಗಾಭಿನಯವನ್ನು ಅನುಸರಿಸಿ ತಮ್ಮನ್ನು ಶುದ್ಧೀಕರಿಸಿ ಪವಿತ್ರಮಾಡಿಕೊಂಡು ಹಂದಿಯ ಮಾಂಸವನ್ನೂ ಅಶುದ್ಧಪದಾರ್ಥವನ್ನೂ ಇಲಿಯನ್ನೂ ತಿನ್ನುವವರು ಒಟ್ಟಿಗೆ ಕೊನೆಗಾಣುವರು ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ತೋಟಗಳಲ್ಲಿ ಒಬ್ಬರ ಹಿಂದೊಬ್ಬರು ಮಧ್ಯದಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು, ಪವಿತ್ರ ಮಾಡಿಕೊಳ್ಳುವವರೂ; ಹಂದಿ ಮಾಂಸವನ್ನೂ, ಅಸಹ್ಯವಾದದ್ದನ್ನೂ, ಇಲಿಯನ್ನೂ ತಿನ್ನುವವರು ಒಟ್ಟಾಗಿ ದಹಿಸಿ ಹೋಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:17
8 ತಿಳಿವುಗಳ ಹೋಲಿಕೆ  

ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಆ ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟುಹೋಗುವವು; ಆ ಬೆಂಕಿಯನ್ನು ಯಾರೂ ನಿಲ್ಲಿಸಲಾರರು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


“ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ,


ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು