Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:2 - ಪರಿಶುದ್ದ ಬೈಬಲ್‌

2 ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:2
35 ತಿಳಿವುಗಳ ಹೋಲಿಕೆ  

ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.


ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆ ಮತ್ತು ವಿಧೇಯತೆಯುಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.


ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.


ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.


ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.


ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.


ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು. ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ.


ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.


ಆದರೆ ದೇವಾಲಯಕ್ಕಿಂತಲೂ ಹೆಚ್ಚಿನವನು ಇಲ್ಲಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.


ನೆನಪಿರಲಿ, ಈ ವಸ್ತುಗಳನ್ನೆಲ್ಲ ಮಾಡಿದವನು ನಾನೇ!’”


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


“ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.


ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಆ ಗ್ರಂಥವನ್ನು ಓದಿದನು.


ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಆಗ ಜನರು ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.


ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು