Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:23 - ಪರಿಶುದ್ದ ಬೈಬಲ್‌

23 ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:23
25 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.


ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು.


“ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು.


ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ನಿಜವಾದ ಆರಾಧಕರು ತಂದೆಯ ಚಿತ್ತಕ್ಕನುಸಾರವಾಗಿ ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ. ಆ ಕಾಲ ಈಗಲೇ ಬಂದಿದೆ ಮತ್ತು ಅಂಥ ಜನರೇ ತನ್ನ ಆರಾಧಕರಾಗಿರಬೇಕೆಂದು ತಂದೆಯು ಬಯಸುತ್ತಾನೆ.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಪ್ರಾರ್ಥನೆಯನ್ನು ಕೇಳುವಾತನೇ, ಜನರೆಲ್ಲರೂ ನಿನ್ನ ಬಳಿಗೆ ಬರುವರು.


ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.


ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.


ಆ ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು.


ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.


ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.


ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”


ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು.


ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ; ನಮ್ಮನ್ನು ಆ ಪಾಪಗಳಿಂದ ಬಿಡಿಸು.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ಈಜಿಪ್ಟಿನಲ್ಲಿರುವ ಯಾವ ಕುಟುಂಬವಾಗಲಿ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬಾರದೆ ಹೋದಲ್ಲಿ ಯೆಹೋವನು ಶತ್ರುಗಳಿಗೆ ತಂದ ವ್ಯಾಧಿಯನ್ನು ಅವರಿಗೂ ಬರಮಾಡುವನು.


ಇದು ಕೇವಲ ಈಜಿಪ್ಟಿನ ಜನರಿಗೆ ಮಾತ್ರವೇ ಆಗಿರದೆ ಯಾವ ದೇಶವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವುದಿಲ್ಲವೋ ಆ ದೇಶದ ಜನರೂ ಅದೇ ರೋಗಕ್ಕೆ ತುತ್ತಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು