Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:5 - ಪರಿಶುದ್ದ ಬೈಬಲ್‌

5 ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:5
32 ತಿಳಿವುಗಳ ಹೋಲಿಕೆ  

ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.


ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.


ಸಹೋದರ ಸಹೋದರಿಯರೇ, ಈ ಲೋಕದ ಜನರು ನಿಮ್ನನ್ನು ದ್ವೇಷಿಸುವಾಗ ಆಶ್ಚರ್ಯಗೊಳ್ಳದಿರಿ.


ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು.


ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು.


ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


“ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ಹೇಳಿದನು: “ನನ್ನ ಸೇವಕರು ಊಟಮಾಡುವರು. ಆದರೆ ದುಷ್ಟಜನರಾದ ನೀವು ಹಸಿದವರಾಗಿರುವಿರಿ. ನನ್ನ ಸೇವಕರು ಕುಡಿಯುವರು. ಆದರೆ ದುಷ್ಟಜನರಾದ ನೀವು ಬಾಯಾರಿದ್ದೀರಿ. ನನ್ನ ಸೇವಕರು ಸಂತೋಷದಲ್ಲಿರುವರು. ದುಷ್ಟಜನರಾದ ನೀವಾದರೋ ನಾಚಿಕೆಗೆ ಒಳಗಾಗುವಿರಿ.


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


“ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.


ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಆ ಗ್ರಂಥವನ್ನು ಓದಿದನು.


ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.


ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು