Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:10 - ಪರಿಶುದ್ದ ಬೈಬಲ್‌

10 ಬಳಿಕ ಯೆಹೋವನು ಆಹಾಜನೊಡನೆ ಮಾತನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತೆ ಯೆಹೋವನು ಆಹಾಜನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪುನಃ ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ಮತ್ತೆ ಯೆಹೋವನು ಆಹಾಜನಿಗೆ - ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳಿಕೋ; ಅದು ಪಾತಾಳದಷ್ಟು ಆಳದಲ್ಲಿದ್ದರೂ ಮೇಲಣ ಲೋಕದಷ್ಟು ಎತ್ತರದಲ್ಲಿದ್ದರೂ ಕೇಳಿಕೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಆಹಾಜನಿಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:10
8 ತಿಳಿವುಗಳ ಹೋಲಿಕೆ  

ಮತ್ತೆ ಯೆಹೋವನು ನನ್ನೊಂದಿಗೆ ಮಾತನಾಡಿದನು.


ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.


ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು.


“ನಿಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”


ಯೆಹೋವನು ಅವನಿಗೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಆ ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.


ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾಮನ ಮಗನಾದ ಅಹಾಜನು ಯೆಹೂದದ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು