ಯೆಶಾಯ 7:14 - ಪರಿಶುದ್ದ ಬೈಬಲ್14 ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.