ಯೆಶಾಯ 7:18 - ಪರಿಶುದ್ದ ಬೈಬಲ್18 “ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಲ್ಲಿನ ನೊಣಗಳೂ ಅಶ್ಶೂರ್‍ದೇಶದ ತುಂಬಿಗಳೂ ಬರಲೆಂದು ಯೆಹೋವನು ಸಿಳ್ಳುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿ |
ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.