Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:2 - ಪರಿಶುದ್ದ ಬೈಬಲ್‌

2 ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:2
28 ತಿಳಿವುಗಳ ಹೋಲಿಕೆ  

“ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಆ ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.


ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.


ಆಗ ಎಫ್ರಾಯೀಮಿನಲ್ಲಿರುವ (ಇಸ್ರೇಲಿನಲ್ಲಿರುವ) ಪ್ರತಿಯೊಬ್ಬನೂ, ಸಮಾರ್ಯದ ನಾಯಕರೂ, ದೇವರು ತಮ್ಮನ್ನು ಶಿಕ್ಷಿಸಿದ್ದಾನೆಂದು ತಿಳಿದುಕೊಳ್ಳುವರು. ಅವರು ಬಹು ಗರ್ವಿಷ್ಠರಾಗಿ ಹೆಚ್ಚಳಪಡುತ್ತಿದ್ದಾರೆ. ಅವರು ಹೇಳುವುದೇನೆಂದರೆ,


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಯೆಹೂದ್ಯರ ಈ ಹೊಸ ರಾಜನ ವಿಷಯ ತಿಳಿದಾಗ ಹೆರೋದನು ಮತ್ತು ಜೆರುಸಲೇಮಿನ ಜನರೆಲ್ಲರೂ ಗಲಿಬಿಲಿಗೊಂಡರು.


ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”


ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.


“ದಾವೀದನ ಮನೆಯ ಬೀಗದ ಕೈಯನ್ನು ಅವನ ಕುತ್ತಿಗೆಯಲ್ಲಿರಿಸುವೆನು. ಅವನು ಬಾಗಿಲನ್ನು ತೆರೆದರೆ ಅದು ತೆರೆದೇ ಇರುವದು. ಅದನ್ನು ಯಾರೂ ಮುಚ್ಚಲಾರರು. ಅವನು ಬಾಗಿಲನ್ನು ಮುಚ್ಚಿದರೆ ಅದು ಮುಚ್ಚಿಯೇ ಇರುವದು. ಅದನ್ನು ತೆರೆಯಲು ಯಾರಿಂದಲೂ ಆಗುವದಿಲ್ಲ.


ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.


“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?


ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಎಫ್ರಾಯೀಮಿನ ಕೆಲವು ನಾಯಕರು ನೋಡಿದರು. ಆ ನಾಯಕರು ಅವರನ್ನು ಎಚ್ಚರಿಸಿದರು. ಆ ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ ಮತ್ತು ಹೆದ್ಲ್ಯೆಯನ ಮಗನಾದ ಅಮಾಸ.


ಅಮಚ್ಯನು ಇಸ್ರೇಲಿನ ಸೈನಿಕರನ್ನು ಎಫ್ರಾಯೀಮ್ ಪ್ರಾಂತ್ಯಕ್ಕೆ ಕಳುಹಿಸಿದನು. ಅವರು ಯೆಹೂದದ ಅರಸನ ಮೇಲೆಯೂ ಜನರ ಮೇಲೆಯೂ ಸಿಟ್ಟುಗೊಂಡು ಕೋಪದಿಂದಲೇ ತಮ್ಮ ಮನೆಗಳಿಗೆ ಹಿಂತೆರಳಿದರು.


ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”


ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.


ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


ಅವರು ನಿನ್ನ ವಿರುದ್ಧವಾಗಿ ಕುತಂತ್ರ ನಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು