Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:22 - ಪರಿಶುದ್ದ ಬೈಬಲ್‌

22 ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವು ಕರೆಯುವ ಹೆಚ್ಚು ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರುಜೇನುಗಳನ್ನೇ ಉಂಡು ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:22
7 ತಿಳಿವುಗಳ ಹೋಲಿಕೆ  

ಆತನು ಒಳ್ಳೆಯದನ್ನು ಆರಿಸಿಕೊಳ್ಳಲು ಮತ್ತು ಕೆಟ್ಟದ್ದನ್ನು ನಿರಾಕರಿಸಲು ಕಲಿತುಕೊಳ್ಳುವವರೆಗೆ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.


ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.


ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.


ಎಷ್ಟೋ ಜನರು ಈ ಬಂಡೆಯಿಂದ ಎಡವಿಬೀಳುವರು. ಅವರು ಬಿದ್ದು ಮುರಿಯಲ್ಪಡುವರು; ಬಲೆಗೆ ಸಿಕ್ಕಿಕೊಳ್ಳುವರು.”


ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.


ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟುಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು